17 May 2024

SSLC ಮತ್ತು PUC ಪಾಸಾದ ಮಹಿಳೆಯರಿಗೆ ಸರ್ಕಾರಿ ಹುದ್ದೆಗಳ ಭರ್ಜರಿ ಉದ್ಯೋಗಾವಕಾಶ….! ಮಹಿಳೆಯರು ಈಗಲೇ ಅರ್ಜಿ ಸಲ್ಲಿಸಿ….!

ಕರುನಾಡ ಜನತೆಗೆ ನಮಸ್ಕಾರಗಳು

ಕರ್ನಾಟಕ ರಾಜ್ಯ ಸರ್ಕಾರವು ನಿರುದ್ಯೋಗವನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಇತ್ತೀಚಿಗೆ ಹಲವಾರು ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತಿದ್ದು ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ( women and child development ) ಇಲಾಖೆಯ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ.

ಇದು ಮಹಿಳಾ ಅಭ್ಯರ್ಥಿಗಳಿಗೆ ಒಂದು ಉತ್ತಮ ಅವಕಾಶವಾಗಿದ್ದು ಈ ನೇಮಕಾತಿಯ ಸಂಪೂರ್ಣ ಅರ್ಹತೆಗಳನ್ನು ತೆಗೆದುಕೊಂಡು ಅರ್ಹರಿದ್ದರೆ ಈ ಕೂಡಲೇ ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರ – ಕರ್ನಾಟಕ ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿದ್ದು ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟಾರೆ ಖಾಲಿ ಇರುವ ಹುದ್ದೆಗಳ ವಿವರವನ್ನು ನೋಡುವುದಾದರೆ

  • ಅಂಗನವಾಡಿ ಕಾರ್ಯಕರ್ತೆ – 106 ಹುದ್ದೆಗಳು
  • ಅಂಗನವಾಡಿ ಸಹಾಯಕಿ – 278 ಹುದ್ದೆಗಳು

  • ಒಟ್ಟಾರೆ 384 ಹುದ್ದೆಗಳು ಖಾಲಿ ಇವೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಯೋಮಿತಿ : Age limit –
    ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 19 ವರ್ಷ ತುಂಬಿರಬೇಕು ಮತ್ತು ಗರಿಷ್ಠ ವಯೋಮಿತಿ 35 ವರ್ಷದೊಳಗಿರಬೇಕು. ವಯೋಮಿತಿಯ ಮೀಸಲಾತಿ ಬಯಸುವ ಅಭ್ಯರ್ಥಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿಯಮಗಳ ಅನುಸಾರ ವಯಾಮಿತ್ಯ ಸಡಿಲಿಕೆಯನ್ನು ನೀಡಲಾಗುವುದು. ವಿದ್ಯಾರ್ಹತೆ – educational qualification ಅಂಗನವಾಡಿ ಸಹಾಯಕಿ ಮತ್ತು ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಪ್ರತ್ಯೇಕವಾದ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಈ ಕೆಳಗಿನಂತಿದೆ.
    ಅಂಗನವಾಡಿ ಸಹಾಯಕ್ಕೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 10ನೇ ತರಗತಿ ಪಾಸ್ ಆಗಿರಬೇಕು. ಅದೇ ರೀತಿ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪಿಯುಸಿ ಅಥವಾ ಡಿಪ್ಲೋಮಾ ಪೂರ್ಣಗೊಳಿಸಿರಬೇಕು. ಪಿಯುಸಿಯ ಜೊತೆಗೆ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ವಿಷಯವನ್ನಾಗಿ ಓದಿರಬೇಕು.

ಮಾಸಿಕ ಸಂಬಳ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ತಕ್ಕಂತೆ ತಿಂಗಳ ವೇತನವನ್ನು ನೀಡಲಾಗುವುದು.

ಈ ಹುದ್ದೆಗಳಿಗೆ ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ – ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಮೊದಲಿಗೆ ಮೆರಿಟ್ ಲಿಸ್ಟ್ ತಯಾರಿಸಿ ನಂತರ ಸಂದರ್ಶನ ಮಾಡುವ ಮೂಲಕ ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು ಫೆಬ್ರುವರಿ 5, 2024 ಕೊನೆಯ ದಿನಾಂಕವಾಗಿರುತ್ತದೆ.

ಆದ್ದರಿಂದ ಅರ್ಹ ಮಹಿಳಾ ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಹುದ್ದೆಗಳಾದ ಅಂಗನವಾಡಿ ಸಹಾಯಕಿ ಮತ್ತು ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಕೊನೆಯ ದಿನಾಂಕದವರೆಗೂ ಕಾಯದೆ ಆದಷ್ಟು ಬೇಗ ಆನ್ಲೈನ್ ಮುಖಾಂತರ ಕೆಳಗಿನ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸಲು ಲಿಂಕ್ – karnemakaone.kar.nic.in

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು 1994 ರಲ್ಲಿ ಪ್ರಾರಂಭವಾಗಿದ್ದು ರಾಜ್ಯ ಸರ್ಕಾರದ ಅಡಿ ಕಾರ್ಯ ನಿರ್ವಹಿಸುತ್ತಿದೆ. ಇಲಾಖೆಯಲ್ಲಿ ರಾಜ್ಯದ ಮಹಿಳೆಯರ ಮಕ್ಕಳ ಹಿರಿಯರ ಮತ್ತು ಅಂಗವಿಕಲರ ಅಭಿವೃದ್ಧಿಗಾಗಿ ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಜೊತೆಗೆ ಅಗತ್ಯ ಯೋಜನೆಗಳನ್ನು ನೀತಿಗಳನ್ನು ರೂಪಿಸುತ್ತದೆ.

Leave a Reply

Your email address will not be published. Required fields are marked *