16 May 2024

ಸ್ವಂತ ಮನೆ ಕಟ್ಟಿಕೊಳ್ಳಲು ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಭರ್ಜರಿ ಸಹಾಯಧನ…! ಹೊಸ ಮನೆ ಕಟ್ಟಿಸಿಕೊಳ್ಳಲು 5 ಲಕ್ಷದವರೆಗೂ ಸಹಾಯಧನ ಪಡೆದುಕೊಳ್ಳಿ ಈಗಲೇ ಅರ್ಜಿ ಸಲ್ಲಿಸಿ…!

ಸ್ವಂತ ಮನೆ ಕಟ್ಟಿಕೊಳ್ಳಲು ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಭರ್ಜರಿ ಸಹಾಯಧನ! ಯೋಜನೆಯ ಸಂಪೂರ್ಣ ಮಾಹಿತಿ ಈಗಲೇ ತಿಳಿಯಿರಿ

ದೇಶದ ಬಡ ಜನರಿಗೆ ಸ್ವಂತ ಮನೆ ಕಟ್ಟಿಕೊಳ್ಳಲು ರಾಜ್ಯ ಮತ್ತು ಕೇಂದ್ರ ಸರ್ಕಾರ ಸೇರಿ ಆರುವರೆ ಲಕ್ಷ ರೂಪಾಯಿಯನ್ನು ಸಹಾಯಧನ ನೀಡುತ್ತಿವೆ. ಈ ಒಂದು ಯೋಜನೆ ಯಾವುದು, ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಯಾರು ಅರ್ಹರು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೆಕ್ಕದಲ್ಲಿ ತಿಳಿದುಕೊಳ್ಳೋಣ.

Awas yojana : ಕರ್ನಾಟಕ ರಾಜ್ಯ ಸರ್ಕಾರವು ಮತ್ತು ಭಾರತ ಕೇಂದ್ರ ಸರ್ಕಾರವು ಬಡ ಜನತೆಗೆ ಸ್ವಂತ ಮನೆ ಕಟ್ಟಿಕೊಳ್ಳಲು ಸಹಾಯಧನ ರೂಪದಲ್ಲಿ ಹಣವನ್ನು ನೀಡುತ್ತಿದೆ.

ಅಂದರೆ ಕರ್ನಾಟಕ ರಾಜ್ಯದಲ್ಲಿ ಈಗಾಗಲೇ ಈ ಯೋಜನೆಯ ಅಡಿಯಲ್ಲಿ ಹಲವಾರು ಬಡ ಕುಟುಂಬದವರು ಈ ಯೋಜನೆಯ ಲಾಭವನ್ನು ಪಡೆದುಕೊಂಡಿದ್ದಾರೆ. ಯೋಜನೆಯ ಹೆಸರು ರಾಜೀವ್ ಗಾಂಧಿ ವಸತಿ ಯೋಜನೆ.

ಯೋಜನೆಯ ವಿವರ: ರಾಜೀವ್ ಗಾಂಧಿ ವಸತಿ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರವು ಹಾಗೂ ರಾಜ್ಯ ಸರ್ಕಾರವು ಸೇರಿ ಹಣದ ಸೌಲಭ್ಯವನ್ನು ಒದಗಿಸುತ್ತವೆ. ಕೇಂದ್ರ ಸರ್ಕಾರವು ಮೂರುವರೆ ಲಕ್ಷ ರೂಪಾಯಿ ಹಾಗೂ ಕರ್ನಾಟಕ ರಾಜ್ಯ ಸರ್ಕಾರವು ಮೂರು ಲಕ್ಷ ರೂಪಾಯಿಯನ್ನು ನೀಡುತ್ತಿವೆ. ಅಂದರೆ ಕರ್ನಾಟಕ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಸೇರಿ ಒಟ್ಟಾರೆ ಆರೂವರೆ ಲಕ್ಷ ರೂಪಾಯಿಯನ್ನು ನೀಡುತ್ತವೆ.

ಒಬ್ಬ ಸಾಮಾನ್ಯ ಬಡ ಕುಟುಂಬದ ವ್ಯಕ್ತಿಯು ತಮ್ಮ ಯೋಗ್ಯತೆಗೆ ತಕ್ಕಂತೆ ಒಂದು ಸಾಮಾನ್ಯ ಸಣ್ಣ ಮನೆಯನ್ನು ಕಟ್ಟಿಕೊಳ್ಳಲು ಎಳುವರಿ ಲಕ್ಷ ರೂಪಾಯಿ ಅಂದಾಜಿನಲ್ಲಿ ಮನೆ ಕಟ್ಟಿಕೊಳ್ಳಬಹುದಾಗಿದೆ.

ಏಳುವರೆ ಲಕ್ಷ ರೂಪಾಯಿ ಹಣದಲ್ಲಿ ಸರ್ಕಾರವು ಆರೂವರೆ ಲಕ್ಷ ರೂಪಾಯಿಯನ್ನು ನೀಡುತ್ತದೆ ಉಳಿದ ಒಂದು ಲಕ್ಷ ರೂಪಾಯಿಯನ್ನು ಫಲಾನುಭವಿಗಳು ತಮ್ಮ ದುಡ್ಡನ್ನು ಹಾಕಿ ಮನೆ ಕಟ್ಟಿಸಿ ಕೊಳ್ಳಬೇಕು.

ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು ಎಂದು ನೋಡುವುದಾದರೆ
ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಲು ಮಹಿಳೆಯರು ಮಾತ್ರ ಅರ್ಹರಾಗಿರುತ್ತಾರೆ. ಆದರೆ ಕೆಲವೊಂದಿಷ್ಟು ಪುರುಷರಿಗೂ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ ಅಂತಹ ಪುರುಷರು ಎಂದರೆ ವಿಶೇಷ ಚೇತನ ಹೊಂದಿದ ಅಭ್ಯರ್ಥಿಗಳು ಹಾಗೂ ಮಾಜಿ ಯೋಧರು ಹಾಗೂ ಹಿರಿಯ ನಾಗರಿಕರಾಗಿದ್ದರೆ ಪುರುಷರು ಸಹ ಅರ್ಜಿ ಸಲ್ಲಿಸಬಹುದಾಗಿದೆ. ಅದೇ ರೀತಿ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಾರ್ಷಿಕ ವರಮಾನವು 32 ಸಾವಿರ ರೂಪಾಯಿಗಿಂತ ಕಡಿಮೆ ಇದ್ದವರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಮೊದಲು ಈ ಯೋಜನೆಯ ಅಡಿಯಲ್ಲಿ ಸೌಲಭ್ಯವನ್ನು ಪಡೆದಿರಬಾರದು ಅಂತಹ ಅಭ್ಯರ್ಥಿಗಳು ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು
ಈ ಯೋಜನೆಗೆ ಅರ್ಜಿ ಸಲ್ಲಿಸಲು ಈ ಕೆಲವೊಂದಿಷ್ಟು ದಾಖಲಾತಿಗಳು ಪ್ರಮುಖವಾಗಿರುತ್ತದೆ ಅವುಗಳೆಂದರೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಆದಾಯ ಪ್ರಮಾಣ ಪತ್ರ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಇನ್ನೂ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹೆಚ್ಚಿನ ಮಾಹಿತಿ ಪಡೆದು ಅರ್ಜಿ ಸಲ್ಲಿಸಿ.

Rajiv Gandhi Awas yojane : https://ashraya.karnataka.gov.in/nannamane/index.aspx

Leave a Reply

Your email address will not be published. Required fields are marked *